ಭಟ್ಕಳ, ಅಕ್ಟೋಬರ್ 31 : ತಾಲೂಕಿನ 149 ವಿದ್ಯಾರ್ಥಿಗಳು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಪ್ರಾಥಮಿಕ ವೈದ್ಯಕೀಯ ವರದಿ ಹೇಳುತ್ತಿದ್ದು, ಅವರಲ್ಲಿ 129 ವಿದ್ಯಾರ್ಥಿಗಳನ್ನು ಪುನರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರುಗಳಲ್ಲಿ 18 ವಿದ್ಯಾರ್ಥಿಗಳಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಸಭೆಗೆ ಮಾಹಿತಿ ನೀಡಿದರು.
ಪಾಲಕರ ಸಭೆಯನ್ನು ಕರೆದು ನವೆಂಬರ್ ೧೦ರಂದು ವಿದ್ಯಾರ್ಥಿಗಳನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಕಳುಹಿಸಿ ಕೊಡಲಾಗುವುದು ಎಂದು ಅವರು ಸಭೆಯಲ್ಲಿ ವಿವರಿಸಿದರು.