ಭಟ್ಕಳ, ಅಕ್ಟೋಬರ್ ೧೦: ನಗರದಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿ ಪ್ರಯತ್ನದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಭಟ್ಕಳ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ಜಿ ಉತ್ತರಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪುರಸಭಾ ಆಡಳಿತ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದೆ. ಕಸ ವಿಲೇವಾರಿಗಾಗಿಯೇ ಸಮಿತಿಯೊಂದನ್ನು ರಚಿಸಲಾಗಿದ್ದು, ಪ್ರತಿ ಮನೆಯಿಂದ ತಿಂಗಳಿಗೆ ೨೦ರೂಪಾಯಿ ಪಡೆಯಲು ಅನುಮತಿ ನೀಡಲಾಗಿದೆ. ಆದರೆ ಕೆಲವಷ್ಟು ಜನರು ಇದಕ್ಕೆ ಸರಿಯಾದ ಸ್ಪಂದನೆ ವ್ಯಕ್ತಪಡಿಸುತ್ತಿಲ್ಲವಾದ್ದರಿಂದ ಸಮಸ್ಯೆ ಸಮಸ್ಯೆಯಾಗಿಯೇ ಉಳಿದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು