ಬೆಂಗಳೂರು, ನ.೧೮: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಸಾವಿರಾರು ಕೋಟಿ ರೂ.ಮೌಲ್ಯದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದ್ದರೂ, ಅದನ್ನು ತಡೆಯಲು ವಿಫಲವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ. ಬದಲಾಗಿ, ಸಂವಿಧಾನ ಬದ್ಧ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಅವರು ವಿಫಲವಾಗಿರುವುದರಿಂದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.
ಆಂಧ್ರಪ್ರದೇಶ ಸರಕಾರವು ಸಚಿವ ಜನಾರ್ದನ ರೆಡ್ಡಿ ಮಾಲಕತ್ವದ ಓಬಳಾಪುರಂ, ಅನಂತಪುರಂ ಮೈನಿಂಗ್ ಕಂಪನಿಗಳು ನಡೆಸುತ್ತಿದೆ ಎನ್ನಲಾದ ಅಕ್ರಮ ಗಣಿಗಾರಿಕೆಯ ಕುರಿತು ತನಿಖೆ ನಡೆಸಲು ಸಿಬಿಐಗೆ ಪತ್ರ ಬರೆದಿದೆ ಎಂದ ಅವರು, ರಾಜ್ಯದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದ್ದರೂ ಅದನ್ನು ತಡೆಯಲು ಸಾಧ್ಯವಾ ಗುತ್ತಿಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದರು.
ಅಕ್ರಮ ಗಣಿಕಾರಿಗೆ ನಡೆಸುತ್ತಿರುವ ಆರೋಪ ಹೊತ್ತಿರುವ ಸಚಿವರಾದ ಕರುಣಾಕರ ರೆಡ್ಡಿ, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಿ ಎಂದು ಆಗ್ರಹಿಸಿದ ಅವರು, ಅಕ್ರಮ ಗಣಿಗಾರಿಕೆಗೆ ಸಹರಿಸಿದ ಎಲ್ಲ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಬೇಕು ಎಂದರು.
ಆಂಧ್ರ ಪ್ರದೇಶ ಸರಕಾರದ ಅರಣ್ಯ ಇಲಾಖೆ ನೀಡಿರುವ ನೋಟಿಸ್ನಲ್ಲಿ ಆಂಧ್ರ ಮತ್ತು ಕರ್ನಾಟಕದ ಗಡಿ ನಾಶವಾಗುತ್ತಿದೆ. ರಾಜ್ಯದಲ್ಲಿ ಗಣಿ ಒತ್ತುವರಿ ಮಾಡಲಾಗಿದೆ. ಅರಣ್ಯದಲ್ಲಿ ಅಕ್ರಮ ನಡೆಯುತ್ತಿರುವುದರ ಕುರಿತು ಉಲ್ಲೇಖಿಸಲಾಗಿದೆ. ರೆಡ್ಡಿ ಸಹೋದರರು ಗಣಿಗಾರಿಕೆಗೆ ಗುತ್ತಿಗೆ ಪಡೆದಿರುವ ಪ್ರದೇಶದಲ್ಲಿ ಉತ್ತಮ ಕಬ್ಬಿಣದ ಅದಿರಿದ್ದು, ಲಕ್ಷಾಂತರ ಟನ್ ಅದಿರು ಲೂಟಿಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಕಬ್ಬಿಣ ಅದಿರಿನ ಹಗಲು ದರೋಡೆಯಾಗುತ್ತಿದ್ದರೂ ಅದನ್ನು ತಡೆಯಲು ವಿಫಲವಾಗಿರುವ ಮುಖ್ಯಮಂತ್ರಿ ಇದರ ನೇರ ಹೊಣೆಯನ್ನು ಹೊರಬೇಕು. ಲೂಟಿಕೋರ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸದಿದ್ದರೆ, ಈ ಹಗಲು ದರೋಡೆಯಲ್ಲಿ ಮುಖ್ಯಮಂತ್ರಿಯೂ ಭಾಗಿಯಾಗಿದ್ದಾರೆ ಎಂಬ ಸಂದೇಶವು ರಾಜ್ಯದ ಜನತೆಗೆ ರವಾನೆಯಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.
“ಜನಾರ್ದನ ರೆಡ್ಡಿಯವರು ಸಿಬಿಐ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದಾದರೂ ತಾನು ಸಿದ್ಧ. ಅಲ್ಲದೆ, ಯಾವುದೆ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಹೇಳಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಜನಾರ್ದನ ರೆಡ್ಡಿಯನ್ನು ಸಂಪುಟದಿಂದ ಕೈ ಬಿಡುವಂತೆ ಸಿದ್ದರಾಮಯ್ಯ ಆಗ್ರಹಿಸಿದರು.
ರೆಡ್ಡಿ ಸಹೋದರರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಕಾನೂನು ರೀತಿ ಕ್ರಮ ಜರುಗಿಸಲು ಮುಖ್ಯಮಂತ್ರಿಗೆ ಸಾಧ್ಯವಾಗದಿದ್ದರೆ, ತಮ್ಮ ಸ್ಥಾನವನ್ನು ತ್ಯಜಿಸಿ ಹೊರ ನಡೆಯಲಿ ಎಂದು ಅವರು ಕಿಡಿಕಾರಿದರು.