ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಬೆಂಗಳೂರು: ಗೋಹತ್ಯೆ ನಿಷೇಧ ಖಚಿತ: ಮುಖ್ಯಮಂತ್ರಿ

ಬೆಂಗಳೂರು: ಗೋಹತ್ಯೆ ನಿಷೇಧ ಖಚಿತ: ಮುಖ್ಯಮಂತ್ರಿ

Sat, 13 Feb 2010 03:27:00  Office Staff   S.O. News Service
ಬೆಂಗಳೂರು, ಫೆ.೧೨: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವ ಸಚಿವ ಸಂಪುಟ ನಿರ್ಧಾರವನ್ನು ಕೈಬಿಡುವ ಪ್ರಶ್ನೆಯ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಯ ಅಭಿಪ್ರಾಯ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾಯ್ದೆ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ. ಹೀಗಾಗಿ ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷಗಳು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸುತ್ತಿವೆ. ಸರಕಾರ ಕೈಗೊಳ್ಳುವ ಪ್ರತಿಯೊಂದು ನಿರ್ಧಾರಗಳಿಗೂ ವಿರೋಧ ವ್ಯಕ್ತಪಡಿಸುವುದೆ ಪ್ರತಿಪಕ್ಷದ ಮುಖಂಡರ ಕೆಲಸವಾಗಿದೆ ಎಂದು ಯಡಿಯೂರಪ್ಪ ಕಿಡಿಕಾರಿದರು.

Share: