ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

Thu, 18 Jul 2024 03:40:25  Office Staff   SOnews

 

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ಕುಟುಂಬಸ್ಥರಿಗೆ ಸರ್ಕಾರದ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ವಿತರಿಸಿದರು.

ಅಂಕೋಲಾ-ಅಂಕೋಲಾ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲಾಗಿದ್ದು, ಕಾರವಾರ -ಅಂಕೋಲಾ ಶಾಸಕರಾದ ಸತೀಶ್ ಸೈಲ್ ಹಾಗೂ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಬುಧವಾರ ಅಂಕೋಲಾ ಪ್ರವಾಸಿ ಮಂದಿರದಲ್ಲಿ  ಮೃತರ ಕುಟುಂಬ ಸದಸ್ಯರಿಗೆ ನೀಡಿದರು.


Share: