ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಗೃಹಲಕ್ಷ್ಮಿ : ಲಿಂಗತ್ವ ಅಲ್ಪಸಂಖ್ಯಾತರ ನೋಂದಣಿಗೆ ಅವಕಾಶ

ಗೃಹಲಕ್ಷ್ಮಿ : ಲಿಂಗತ್ವ ಅಲ್ಪಸಂಖ್ಯಾತರ ನೋಂದಣಿಗೆ ಅವಕಾಶ

Sat, 13 Jul 2024 07:31:58  Office Staff   S O News

ಕಾರವಾರ:- ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾAಶದಲ್ಲಿ ಅರ್ಜಿಸಲ್ಲಿಸುವ ಸಂದರ್ ಭದಲ್ಲಿ National Portal For Transgender Person ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾAಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ ವಾಸವಾಗಿರುವ ಲಿಂಗತ್ವ ಅಲ್ಪಸಂಖ್ಯಾತರು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್ ಜೆಂಡರ್ ಗುರುತಿನಚೀಟಿ, ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ನೀಡಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: