ಚಿಕ್ಕಬಳ್ಳಾಪುರ ಡಿಸೆಂಬರ್ ೦೧: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡಿಸೆಂಬರ್ ೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಂಡಿಕಲ್ ಆಸ್ಪತ್ರೆ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಡಿಕಲ್ ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ಶಂಕುಸ್ಥಾಪನೆ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ.ಪಿ.ಬಚ್ಚೇಗೌಡ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಎಂ.ವೀರಪ್ಪ ಮೊಯ್ಲಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿನುತ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಚೆಂಡೂರು ವಿ.ವೆಂಕಟೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಳಿನಿ ಗೌಡ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಗಂಗಾಧರಪ್ಪ, ಜಿ.ಪಂ.ಸದಸ್ಯ ಎ.ಡಿ.ಆವರಪ್ಪ, ತಾ.ಪಂ. ಸದಸ್ಯ ವಿ.ವೆಂಕಟೇಶ್, ಮಂಡಿಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಇಮಾಮ್ ಸಾಬ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಲಕ್ಷ್ಮಿದೇವಮ್ಮ ಭಾಗವಹಿಸುವರು.