ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಗೆ ಲೋಕಾಯುಕ್ತ ದಾಳಿ

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಗೆ ಲೋಕಾಯುಕ್ತ ದಾಳಿ

Tue, 23 Jul 2024 14:16:05  Office Staff   SO News

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಕಾಶ್.ಜಿ.ಎನ್  ಶಿವಮೊಗ್ಗ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

  ಒಟ್ಟು 3 ಸ್ಥಳಗಳಲ್ಲಿ  ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ಪ್ರಕಾಶ್ ಜಿ.ಎನ್ ರವರಿಗೆ ಸಂಬಂದಿಸಿದಂತೆ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಅಂದಾಜು ಸ್ಥಿರಾಸ್ಥಿ ಮೌಲ್ಯ ರೂ 1,57,00,000/- ಕಂಡು ಬಂದಿರುತ್ತದೆ. ಹಾಗೂ ಅವರ ವಾಸದ ಮನೆಯಲ್ಲಿ ರೂ 38,32,630/- ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 5,20,000/-ರೂ  ಮೌಲ್ಯದ  ವಾಹನಗಳು, ಅಂದಾಜು 11,30,000/-ರೂ ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12,86,500/- ನಗದು ಹಣ ಪತ್ತೆಯಾಗಿದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿ,   ಪ್ರಕಾಶ್ ಜಿ.ಎನ್ ರವರ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‍ನ್ನು ಶೋಧನೆ ಮಾಡಲಾಗಿ ಈ ಬ್ಯಾಂಕ್ ಲಾಕರ್‍ನಲ್ಲಿ ರೂ,32,06,000/- ನಗದು ಹಣ ಮತ್ತು ಅಂದಾಜು ರೂ 18,48,200/- ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದೆ.  ಅಂದಾಜು 2,05,23,330/- ರೂ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆ ಮತ್ತು ಲಾಕರ್ ನಲ್ಲಿ  ಪತ್ತೆಯಾದ ನಗದು ರೂ 44,06,000/- ಗಳನ್ನು  ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರl ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ಹೆಚ್.ಎಸ್.ಸುರೇಶ್ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿದ್ದಾರೆ.

ಈ ದಾಳಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.


Share: