ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಗರ ಪ್ರತಿಭಟನೆ. ಪೊಲೀಸರಿಂದ ಪ್ರತಿಭಟನಾಕಾರರು ವಶಕ್ಕೆ

ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಗರ ಪ್ರತಿಭಟನೆ. ಪೊಲೀಸರಿಂದ ಪ್ರತಿಭಟನಾಕಾರರು ವಶಕ್ಕೆ

Fri, 28 Jun 2024 23:14:38  Office Staff   SO News

ಕಾರವಾರ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆದ 187 ಕೋಟಿ ರೂ. ಹಗರಣ ಖಂಡಿಸಿ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಬಿಜೆಪಿ ಕರೆಯ ಮೇರೆಗೆ  ಕಾರವಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ  ವ್ಯಕ್ತಪಡಿಸಿದರು.

ಸರ್ಕಾರದ ವಿರುದ್ಧ ವಿವಿಧ  ಘೋಷಣಾ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕರರನ್ನ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ್ ಸೇರಿದಂತೆ  ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು. 


Share: