ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜಿಲ್ಲೆಯಲ್ಲಿ ಮಳೆ ಇಳಿಮುಖ, 5 ಕಾಳಜಿ ಕೇಂದ್ರಗಳಲ್ಲಿ 150 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲೆಯಲ್ಲಿ ಮಳೆ ಇಳಿಮುಖ, 5 ಕಾಳಜಿ ಕೇಂದ್ರಗಳಲ್ಲಿ 150 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Wed, 10 Jul 2024 01:56:15  Office Staff   SOnews


ಕಾರವಾರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕವಾಗಿದ್ದ ಮಳೆಯ ಪ್ರಮಾಣ, ಮಂಗಳವಾರ ಇಳಿಮುಖವಾಗಿದ್ದು, ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ 150 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷÀಧ ಸೌಲಭ್ಯವನ್ನು ಒದಗಿಸಲಾಗಿದ್ದು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 10 ಮನೆಗಳಿಗೆ ಭಾಗಶಃ ಹಾನಿಯಾದ ಬಗ್ಗೆ ವರದಿಯಾಗಿದೆ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುÄನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.


Share: