ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜು.10 ರಂದು ಭಟ್ಕಳದಲ್ಲಿ ಮೀನು ಕೃಷಿಕರ ದಿನಾಚರಣೆ

ಜು.10 ರಂದು ಭಟ್ಕಳದಲ್ಲಿ ಮೀನು ಕೃಷಿಕರ ದಿನಾಚರಣೆ

Wed, 10 Jul 2024 02:01:10  Office Staff   SOnews

 

ಕಾರವಾರ: ಜಿಲ್ಲಾ ಪಂಚಾಯತ್ ಮತ್ತು ಮೀನುಗಾರಿಕೆ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಮೀನು ಕೃಷಿಕರ ದಿನಚಾರಣೆಯನ್ನು ಜು.10 ರಂದು ಬೆಳಗ್ಗೆ 10.30 ಕ್ಕೆ ಎಂ.ಎಂ. ರೆಸಾರ್ಟ್ಸ್, ಗೊರಟೆ ಕ್ರಾಸ್ ಬಳಿ, ಭಟ್ಕಳದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ್, ಬೆಳಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಎಲ್. ನಾಯ್ಕ, ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.


Share: