ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣ ಸಿಐಡಿಗೆ ವರ್ಗಾವಣೆ

ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣ ಸಿಐಡಿಗೆ ವರ್ಗಾವಣೆ

Sun, 23 Jun 2024 22:05:41  Office Staff   SOnews

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.  

ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.   ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್​ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ.  

ಹಾಸನದ ಸೆನ್‌ ಪೊಲೀಸ್‌ ಠಾಣೆಯಲ್ಲಿಯೇ (SEN Police Hassan) ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342, ಹಾಗೂ 506 ಅಡಿಯಲ್ಲಿ ಕೇಸ್‌ ದಾಖಲಾಗಿತ್ತು. ಸಕಲೇಶಪುರದ ಡಿ ವೈ ಎಸ್ ಪಿ ಪ್ರಮೋದ್ ಬಂಧಿಸಿರುವ ಪೊಲೀಸ್ ಅಧಿಕಾರಿಯಾಗಿದ್ದಾರೆ.


Share: