ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಬೆಂಗಳೂರು:ರಾಜ್ಯದ ನೀರಾವರಿ ಕ್ಷೇತ್ರಕ್ಕೆ ಒಳಪಡುವ ಕೆರೆಗಳನ್ನು ತುಂಬಿಸಲು ಸರ್ಕಾರದ ವಿಶೇಷ ಆದ್ಯತೆ - ಬಸವರಾಜ್ ಬೊಮ್ಮಾಯಿ

ಬೆಂಗಳೂರು:ರಾಜ್ಯದ ನೀರಾವರಿ ಕ್ಷೇತ್ರಕ್ಕೆ ಒಳಪಡುವ ಕೆರೆಗಳನ್ನು ತುಂಬಿಸಲು ಸರ್ಕಾರದ ವಿಶೇಷ ಆದ್ಯತೆ - ಬಸವರಾಜ್ ಬೊಮ್ಮಾಯಿ

Wed, 17 Feb 2010 15:56:00  Office Staff   S.O. News Service

ಬೆಂಗಳೂರು,ಫೆಬ್ರವರಿ 17:ರಾಜ್ಯದ ನೀರಾವರಿ ಕ್ಷೇತ್ರಕ್ಕೆ ಒಳಪಡುವ ಕೆರೆಗಳನ್ನು ತುಂಬಿಸಲು ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಕೃಷ್ಣಾ ಮತ್ತು ಕಾವೇರಿ ನೀರಾವರಿ ಪ್ರದೇಶದ ನೂರಾರು ಕೆರೆಗಳನ್ನು ತುಂಬಿಸಿ, ಈ ಭಾಗದಲ್ಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

 

 

ರೈತ ಮುಖಂಡರೊಟ್ಟಿಗೆ ಸಮಾಲೋಚನೆ ನಡೆಸಿದ ಅವರು, ನೀರಾವರಿ ಕ್ಷೇತ್ರಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ. ತೀವ್ರ ನೀರಿನ ಅವಶ್ಯಕತೆ ಇರುವ ಬರ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ನೀರಿನ ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಸಾಧ್ಯವಿರುವ ಎಲ್ಲಾ ಪ್ರದೇಶಗಳಿಗೂ ನೀರಾವರಿ ಕ್ಷೇತ್ರವನ್ನು ವಿಸ್ತರಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

 

 

ಇದಲ್ಲದೇ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಕಾಮಗಾರಿಗಳು ಆರಂಭಗೊಂಡಿದ್ದು, ಈ ಪ್ರದೇಶದಲ್ಲೂ ಸಹ ಪ್ರಮುಖ ಕೆರೆಗಳನ್ನು ತುಂಬಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ನೀರು ಸಂಗ್ರಹಕ್ಕಿಂತ ನೀರು ನಿರ್ವಹಣೆಗೆ ತಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ನೀರಿನ ಹರಿವಿನ ಪ್ರಮಾಣವನ್ನು ನಿಖರವಾಗಿ ತಿಳಿಸುವ ಎಲೆಕ್ಟ್ರೋ ಫ್ಲೋ ಸಿಸ್ಟಂ ಅನ್ನು ಅಳವಡಿಸಲಾಗುತ್ತಿದೆ.

 

ರೈತರಿಗೆ ನೀರಿನ ಬಳಕೆ ಬಗ್ಗೆ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿದ್ದು ಇದರಿಂದ ಉತ್ತಮ ನೀರು ನಿರ್ವಹಣೆ ಸಾಧ್ಯವಾಗಲಿದೆ ಬಸವರಾಜ ಬೊಮ್ಮಾಯಿ ಹೇಳಿದರು.

 

ಬಯಲುಸೀಮೆಯ ಕೆರೆಗಳ ದುರಸ್ತಿ ಮತ್ತು ಹೂಳು ಎತ್ತುವುದಕ್ಕೆ ಈ ಸರ್ಕಾರ ಆದ್ಯತೆ ನೀಡುತ್ತಿದ್ದು, ವಿಶ್ವ ಬ್ಯಾಂಕ್ ಸಹಯೋಗದಲ್ಲಿ 3900 ಕೆರೆಗಳ ಆಧುನೀಕರಣ ಕಾರ್ಯ ಈ ವರ್ಷ ಆರಂಭಗೊಳ್ಳಲಿದೆ. ಸ್ಥಳೀಯ ರೈತರ ನೇತೃತ್ವದಲ್ಲಿ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ರೈತರೇ ಈ ಯೋಜನೆಗಳ ಉಸ್ತ್ತುವಾರಿ ಹೊಣೆ ಹೊರುವಂತೆ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ರೈತ ನಾಯಕರಿಗೆ ತಿಳಿಸಿದರು. 

 


Share: