ಭಟ್ಕಳ, ಡಿಸೆಂಬರ್ 20: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೋರ್ವ ಮಾನಸಿಕ ಒತ್ತಡಕ್ಕೊಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಶಿರಾಲಿ ಗ್ರಾಮಪಂಚಾಯತ ವ್ಯಾಪ್ತಿಯ ಅಳಿವೆಕೋಡಿಯಲ್ಲಿ ಶನಿವಾರ ಬೆಳಿಗ್ಗೆ 10ಗಂಟೆ ಸುಮಾರಿಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೇಡು ನಾಗಪ್ಪ ಮೊಗೇರ (48) ಎಂದು ಗುರುತಿಸಲಾಗಿದೆ. ಮೃತರು ಹೆಂಡತಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವರದಿ: ವಸಂತ ದೇವಾಡಿಗ