ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ದಿಲ್ಲಿ ಮು.ಮಂ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು; ಸೆರೆವಾಸ ಮುಂದುವರಿಕೆ

ದಿಲ್ಲಿ ಮು.ಮಂ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು; ಸೆರೆವಾಸ ಮುಂದುವರಿಕೆ

Fri, 12 Jul 2024 17:38:14  Office Staff   SOnews

 

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.  ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿ ನಿರ್ದೇನಾಲಯ ದಾಖಲಿಸಿದ ಪ್ರಕರಣದಲ್ಲಿ ಈ ಜಾಮೀನು ಮಂಜೂರು ಮಾಡಲಾಗಿದೆ. ತಮ್ಮನ್ನು ಬಂಧಿಸಿದ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ನೀಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಕೇಜ್ರಿವಾಲ್ ಅವರ ಮೇಲ್ಮನವಿ ಅರ್ಜಿಯನ್ನು ವಿಸ್ತøತ ಪೀಠಕ್ಕೆ ವರ್ಗಾಯಿಸಿದೆ. ಹಣ ದುರ್ಬಳಕೆ ತಡೆ ಪ್ರಕರಣದ ಸೆಕ್ಷನ್ 13ರ ಅಡಿಯಲ್ಲಿ ಬಂಧಿಸುವ ಅಗತ್ಯವಿತ್ತೇ ಎಂಬ ಪ್ರಶ್ನೆಯನ್ನು ಪರಿಶೀಲಿಸುವಂತೆ ವಿಸ್ತೃತ ಪೀಠಕ್ಕೆ ಕೋರಲಾಗಿದೆ.

ತೆರೆದ ನ್ಯಾಯಾಲಯದಲ್ಲಿ ತೀರ್ಪಿನ ಪ್ರಮುಖ ಅಂಶಗಳನ್ನು ಓದಿದ ನ್ಯಾಯಮೂರ್ತಿ ಖನ್ನಾ ಅವರು, ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 19ರ ಮಾನದಂಡದಲ್ಲಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ನಂಬಲಾಗಿದೆ. ಆದಾಗ್ಯೂ ಈ ಹಿಂದಿನ ಸೆರೆವಾಸದ ಹಿನ್ನೆಲೆಯಲ್ಲಿ ಪೀಠ ಅವರಿಗೆ ಮಧ್ಯಂತರ ಜಾಮೀನು ನೀಡುತ್ತಿದೆ. ವಿಸ್ತೃತ ಪೀಠ ಈ ಮಧ್ಯಂತರ ಜಾಮೀನಿನ ಪ್ರಶ್ನೆಯನ್ನು ಪರಿಷ್ಕರಿಸಬಹುದು ಎಂದು ಸ್ಪಷ್ಟಪಡಿಸಿದರು.  ಜೂನ್ 25ರಂದು ಸಿಬಿಐ ಇವರನ್ನು ಬಂಧಿಸಿದ ಕಾರಣದಿಂದ ಕೇಜ್ರಿವಾಲ್ ಅವರ ಸೆರೆಮನೆ ವಾಸ ಮುಂದುವರಿಯಲಿದೆ.


Share: