ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಬೆಂಗಳೂರು: ಗ್ರಾ.ಪಂ. ಚುನಾವಣಾ ನೀತಿ ಸಂಹಿತೆ ಜಾರಿ - ಸರ್ಕಾರಿ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚನೆ

ಬೆಂಗಳೂರು: ಗ್ರಾ.ಪಂ. ಚುನಾವಣಾ ನೀತಿ ಸಂಹಿತೆ ಜಾರಿ - ಸರ್ಕಾರಿ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚನೆ

Fri, 16 Apr 2010 04:41:00  Office Staff   S.O. News Service

ಬೆಂಗಳೂರು,ಏ,೧೫:ಗ್ರಾಮ ಪಂಚಾಯತ್ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ, ತಾಲೂಕು ಪಂಚಾಯತ್, ಎ.ಪಿ.ಎಂ.ಸಿ. ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಅಧ್ಯಕ್ಷರುಗಳಿಗೆ ಒದಗಿಸಲಾದ ಸರಕಾರಿ ವಾಹನಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ.

 

 

ವಾಹನಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ನೀಡಬೇಕು ಎಂದು ಸೂಚಿಸಿದ್ದು, ಸಂಬಂಧಪಟ್ಟ ಜಿಲ್ಲಾಡಳಿತಗಳ ವಶಕ್ಕೆ ವಾಹನಗಳನ್ನು ಒಪ್ಪಿಸಬೇಕಾಗಿದೆ.

ಇದಲ್ಲದೇ ಎಲ್ಲಾ ನಿರೀಕ್ಷಣಾ ಮಂದಿರಗಳು, ಪ್ರವಾಸಿ ಮಂದಿರಗಳು, ಮಂಡಳಗಳ/ನಿಗಮಗಳ ಅತಿಥಿ ಗೃಹಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳ ಅಧೀನಕ್ಕೆ ಪಡೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

 

ಸದಾಚಾರ ಸಂಹಿತೆಯು ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯೊಳಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯೊಳಗೆ ಆಯುಧಗಳ ರಹದಾರಿ ಹೊಂದಿರುವ ಪರವಾನಗಿದಾರರು ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸುವಂತೆಯೂ ಸೂಚಿಸಲಾಗಿದೆ.


Share: