ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನೇಹಾ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ

ನೇಹಾ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ

Wed, 15 May 2024 17:03:48  Office Staff   SOnews

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ಹುಡುಗಿ ನೇಹಾ ರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ರೀತಿಯಲ್ಲೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.   

ಆರೋಪಿಯನ್ನು ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ (21) ಎಂದು ಗುರುತಿಸಲಾಗಿದೆ. ಈತ ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಎಂಬಾಕೆಯನ್ನು ಕಳೆದ ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದು, ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ.   ಇಂದು ಬೆಳ್ಳಂಬೆಳಗ್ಗೆ ಯುವತಿಯ ಮನೆಯ ಬಾಗಿಲು ತಟ್ಟಿದ ಗಿರೀಶ್, ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.  ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


Share: