ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪ್ರಾಥಮಿಕ ಶಾಲಾ ಶಿಕ್ಷಕರ ’ಬೆಂಗಳೂರು ಚಲೋ’ ಗೆ ಐಟಾ ಬೆಂಬಲ; ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಆಗ್ರಹ

ಪ್ರಾಥಮಿಕ ಶಾಲಾ ಶಿಕ್ಷಕರ ’ಬೆಂಗಳೂರು ಚಲೋ’ ಗೆ ಐಟಾ ಬೆಂಬಲ; ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಆಗ್ರಹ

Mon, 12 Aug 2024 02:24:53  Office Staff   SOnews

ಭಟ್ಕಳ: ಬಡ್ತಿ ಮತ್ತು ವರ್ಗಾವಣೆಗಾಗಿ ಆಗ್ರಹಿಸಿ  “ಬೆಂಗಳೂರು ಚಲೋ”  ಮೂಲಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುವ ಪ್ರತಿಭಟನೆಗೆ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೊಸಿಯೇಶನ್(ರಿ) ಐಟಾ ಕರ್ನಾಟಕವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದು ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಂಘದ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ೧ರಿಂದ ೫ ನೇ ತರಗತಿ ವರೆಗೆ ಪಾಠ ಮಾಡುತ್ತಿರುವ ಶಿಕ್ಷಕರು ಪದವಿಧರರಾಗಿದ್ದ ಅವರನ್ನು ೬-೮ ನೇ ತರಗತಿಗೆ ಪಾಠ ಮಾಡುವ ”ಜಿಪಿಟಿ ಶಿಕ್ಷಕಕರು’ ಹುದ್ದೆಗೆ ಬಡ್ತಿ ನೀಡಬೇಕು, ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ-೨೦೧೭ಕ್ಕೆ ತಿದ್ದುಪಡಿ ತರಬೇಕು, ಸೇವಾ ಜೇಷ್ಠತೆ, ಬಡ್ತಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಅನ್ಯಾಯ ಸೇರಿದಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಐಟಾ ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 


Share: