ಕಾರವಾರ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾದ್ಯತೆಯ ಹಿನ್ನೆಲೆಯಲ್ಲಿ ಭಾರತೀಯ ಹವಮಾನ ಇಲಾಖೆ ನೀಡಿದ ಹವಮಾನ ಮಾಹಿತಿಯಂತೆ ಮೇ 24 ವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವಂತೆ ಮೀನುಗಾರಿಕೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ