ಶಿರಸಿ, ಅಕ್ಟೋಬರ್ 6: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನೆರವಾಗಲು ಕೇಂದ್ರದಿಂದ ಐದು ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಿಳಿಸಿದ್ದಾರೆ. ಅವರು ಶಿರಸಿಯಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಅವಲೋಕನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಮಳೆ, ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡವರಿಗೆ ಇಪ್ಪತ್ತೈದು ಸಾವಿರ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುವುದು ಎಂದು ಅವರು ಘೋಷಿಸಿದರು. ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸಿದ್ದಾರೆ ಎಂದು ಅವರು ತಿಳಿಸಿದರು.
ಅಧಿಕಾರಿಗಳ ಪ್ರಕಾರ ಶಿರಸಿ ತಾಲ್ಲೂಕಿನಲ್ಲಿ ಮಳೆಯಿಂದಾಗಿ ಆಗಿರುವ ನಷ್ಟ ರೂ. 2.18 ಕೋಟಿ ಆಗಿರುತ್ತದೆ.