ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ. ಕಾರವಾರದಲ್ಲಿ ಬೃಹತ್ ರೋಡ್ ಶೋ.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ. ಕಾರವಾರದಲ್ಲಿ ಬೃಹತ್ ರೋಡ್ ಶೋ.

Sat, 13 Apr 2024 02:51:53  Office Staff   SO News

ಕಾರವಾರ : ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ  ಗಂಗೂಬಾಯಿ ಮಾನಕರ್ ಗೆ ಮೂರು ಸೆಟ್ ಗಳಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ , ಕಾರ್ಕಳ ಶಾಸಕ ಸುನೀಲ್ ಕುಮಾರ್, ಖಾನಾಪುರ ಶಾಸಕ ವಿಠ್ಠಲ್ ಹಲಗೆಕರ್,  ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಇದ್ದರು.

 ನಾಮಪತ್ರ ಸಲ್ಲಿಕೆ ಪೂರ್ವದಲ್ಲಿ ಕಾರವಾರದಲ್ಲಿ ಬೃಹತ್ ರ್ಯಲ್ಲಿ ನಡೆಯಿತು. ದೈವಜ್ಞ ಭವನದಿಂದ ಅಂಬೇಡ್ಕರ್ ವೃತ್ತದವರೆಗೆ ರ್ಯಾಲಿ ನಡೆಸಲಾಯಿತು.  ಬಳಿಕ ಆಗಮಿಸಿದ ಮುಖಂಡರು  ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.


Share: