ಭಟ್ಕಳ: ತಾಲೂಕಿನ ಬೆಳಕೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಿಣ ವ್ಯವಸಾಯ ಸಹಕಾರಿ ಸಂಘದಿಂದ ಸ್ವಾತಂತ್ರ್ಯೋತ್ಸದ ದಿನದಂದು ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಲಾಗಿದ್ದ ಬಸ್ ತಂಗುದಾಣವನ್ನು ಸಂಘದ ಅಧ್ಯಕ್ಷ ಮಾದೇವ ನಾಯ್ಕ ಉದ್ಘಾಟಿಸಿ ಲೋಕಾರ್ಪಣೆಗೈದರು.
ನಂತರ ಮಾತನಾಡಿದ ಅವರು, ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಈ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಬಸ್ ತಂಗು ದಾಣ ಉದ್ಘಾಟಿಸಿದ್ದು ನನಗೆ ತುಂಬ ಸಂತೋಷ ಉಂಟಾಗಿದೆ. ಸಾರ್ವಜನಿಕರ ಸಹಕಾರದಿಂದ ಇಂದು ಸಂಸ್ಥೆ ಅಭಿವೃದ್ಧಿ ಹೊಂದಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಜನೋಪಯೋಗಿ ಯೋಜನೆಗಳನ್ನು ಸಂಸ್ಥೆ ಹಮ್ಮಿಕೊಳ್ಳುತ್ತದೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಪಾಂಡು ನಾಯ್ಕ, ನಿರ್ದೇಶಕರಾದ ಲಕ್ಷ್ಮೀನಾರಾಯಣ ನಾಯ್ಕ, ದಾಮೋದರ ನಾಯ್ಕ, ಲೋಕೇಶ್ ನಾಯ್ಕ, ಮಂಜು ಮೊಗೇರ, ಭಾಸ್ಕರ ಗೊಂಡ, ರವಿರಾಜ್ ಜೈನ್, ಲಲಿತಾ ನಾಯ್ಕ, ಭಾರತಿ ನಾಯ್ಕ, ನಾಗೇಶ್ ನಾಯ್ಕ, ಶಾರದಾ ನಾಯ್ಕ,ಪ್ರಧಾನ ವ್ಯವಸ್ಥಾಪಕ ಅಣ್ಣಪ್ಪ ನಾಯ್ಕ, ಗ್ರಾಮ ಪಂಚಾಯತ ಅಧ್ಯಕ್ಷ ಜಗದೀಶ ನಾಯ್ಕ, ಬ್ಯಾಂಕಿನ ಷೇರುದಾರರು ಉಪಸ್ಥಿತರಿದ್ದರು.