ಭಟ್ಕಳ, ಜನವರಿ 9: ಭಟ್ಕಳ ಬಸ್ ನಿಲ್ದಾಣದ ಬಳಿ ಸಂಶಯಾಸ್ಪದವಾಗಿ ಅಲೆದಾಡುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಸಾಗರ ತಾಲೂಕಿನ ನಿವಾಸಿ ಜಬಿಯುಲ್ಲಾ ತಂದೆ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಬಂಧಿತನನ್ನು ತಾಲೂಕು ದಂಡಾಧಿಕಾರಿ ಎಸ್.ಎಮ್.ನಾಯ್ಕರ ಸಮ್ಮುಖದಲ್ಲಿ ಹಾಜರುಪಡಿಸಲಾಗಿದ್ದು, ಜನೇವರಿ 12ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಸೈ ಉಮೇಶ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.