ಚಿಕ್ಕಬಳ್ಳಾಪುರ, ಡಿಸೆಂಬರ್ 8: ಸಾರ್ವಜನಿಕ ಶಿಕ್ಷಣ ಇಲಾಖೆಯು ೨೦೦೯-೧೦ನೇ ಸಾಲಿನ ಪ್ರೌಢಶಾಲಾ ಸಹಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡಿಸೆಂಬರ್ ೮ ರಂದು ಬೆಳಿಗ್ಗೆ ೧೧ ಗಂಟೆಗೆ ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ರವರ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ವಿಭಾಗೀಯ ಸಹನಿರ್ದೇಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಬೆಂಗಳೂರು-೧, ಇಲ್ಲಿ ಡಿಸೆಂಬರ್ ೯ ರಿಂದ ೧೭ ರೊಳಗೆ ಹಾಜರಾಗತಕ್ಕದ್ದು.
ಪ್ರಕಟಗೊಂಡ ತಾತ್ಕಾಲಿಕ ಆಯ್ಕೆಪಟ್ಟಿಗೆ ನಿಗಧಿತ ಆಕ್ಷೇಪಣೆಗಳನ್ನು ಡಿಸೆಂಬರ್ ೯ ರಿಂದ ೧೭ ಸಂಜೆ ೫ ಗಂಟೆಯೊಳಗೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಕಛೇರಿಯಲ್ಲಿ ದಾಖಲೆಗಳ ಸಮೇತವಾಗಿ ಅಭ್ಯರ್ಥಿಗಳೇ ಖುದ್ದು ಹಾಜರಾಗಿ ಸಲ್ಲಿಸತಕ್ಕದ್ದು, ನಂತರ ಬಂದಂತಹ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ಈಗಾಗಲೇ ಅಂತರ್ಜಾಲದಲ್ಲಿ ಪ್ರಕಟಿತವಾದ ಪರಿಷ್ಕೃತ ಕೀ ಉತ್ತರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.