ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಅರಣ್ಯ ಅತಿಕ್ರಮಣ; ಸುನೀಲ ನಾಯ್ಕ ಆರೋಪ

ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಅರಣ್ಯ ಅತಿಕ್ರಮಣ; ಸುನೀಲ ನಾಯ್ಕ ಆರೋಪ

Sun, 02 Jun 2024 06:06:59  Office Staff   S O News

ಭಟ್ಕಳ: ಉಸ್ತುವಾರಿ ಸಚಿವರ ಮಾಲೀಕತ್ವದ ಬಸ್ತಿಮಕ್ಕಿಯಲ್ಲಿನ ಬೀನಾ ವೈದ್ಯ ಇಂಟರ್ನ್ಯಾಷನಲ್ ಸ್ಕೂಲ್ ಜಾಗದ ಪಕ್ಕದಲ್ಲಿನ ಸರ್ಕಾರದ ಅರಣ್ಯ ಭೂಮಿ ಒತ್ತುವರಿ ಮಾಡಿ ಅಲ್ಲಿನ ಮಣ್ಣು ಸಾಗಾಟ ಮಾಡಿದ ಆರೋಪ ಹಾಗೂ ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳದೇ, ಅಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದರೆ, ಒತ್ತುವರಿ ಮಾಡಿದ್ದ ಅರಣ್ಯ ಭೂಮಿಯನ್ನು ಪೆನ್ಸಿಂಗ್ ಮಾಡಿಲ್ಲ. ಎಂದು ಮಾಜಿ ಶಾಸಕ ಸುನೀಲ ನಾಯ್ಕ ಆರೋಪಿಸಿದ್ದಾರೆ. ಅವರು ಇಲ್ಲಿನ ಮಣ್ಕುಳಿಯ ಬಿಜೆಪಿ ಕಾರ್ಯಾಲಯದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಬೀನಾ ವೈದ್ಯ ಹಿಂದುಗಡೆ ಎಕರೆಗಟ್ಟಲೇ ಜಾಗವನ್ನು ಮಣ್ಣು ಸಾಗಾಟ ಮಾಡುತ್ತಿದ್ದಾರೆ. 15 ದಿನ ಕಾಲಾವಕಾಶ ನೀಡಿದ್ದೇವೆ. ಅಲ್ಲಿಯವರೆಗೆ ಅರಣ್ಯ ಇಲಾಖೆ ಪುನಃ ಜಾಗವನ್ನು ವಶಪಡಿಸಿಕೊಂಡು ತಂತಿ ಬೇಲಿಯನ್ನು ಹಾಕಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಇಲಾಖೆಯ ಮುಂದುಗಡೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮಾತನಾಡಿ, "ಭಟ್ಕಳದಲ್ಲಿ ಅಕ್ರಮವಾಗಿ ಹಿಂಸಾತ್ಮಕವಾಗಿ ಗೋ ಕಳ್ಳರಿಂದ ಗೋ ಸಾಗಾಟ ನಡೆಯುತ್ತಿದೆ. ಈ ಬಗ್ಗೆ ಹಿಂದು ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಪೋಲೀಸರನ್ನು ಪ್ರಶ್ನಿಸಿದ್ದೇವೆ. ಇದಕ್ಕೆ ಪೋಲಿಸ್ ಇಲಾಖೆ ಇನ್ನೂ ತನಕ ಗೋವುಗಳನ್ನು ರಕ್ಷಿಸುವ ಕೆಲಸ ಮಾಡಿಲ್ಲ. ಆದರೆ ನಮ್ಮ ಹಿಂದು ಸಂಘಟನೆ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಸಾಕಷ್ಟು ಗೋವುಗಳನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ಭಟ್ಕಳದಲ್ಲಿ ಯಾವುದೇ ಪೊಲೀಸ್ ಚೆಕ್ ಪೋಸ್ಟ ಕೆಲಸ ನಿರ್ವಹಿಸುತ್ತಿಲ್ಲ. ಎಲ್ಲವೂ ನಿಷ್ಕ್ರಿಯವಾಗಿದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು, ಇಲ್ಲವಾದಲ್ಲಿ ಪಕ್ಷದಿಂದ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು."

ಈ ಸಂದರ್ಭದಲ್ಲಿ ಮಾಜಿ ಪಶ್ಚಿಮ ಘಟ್ಟ ಸಂರಕ್ಷಣೆ ಆಯೋಗದ ಅಧ್ಯಕ್ಷ ಗೋವಿಂದ ನಾಯ್ಕ, ತಾಲೂಕು ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ರಾಜ್ಯ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ಸುರೇಶ ನಾಯ್ಕ ಕೋಣೆಮನೆ, ಮೋಹನ ಮುಂತಾದವರು ಉಪಸ್ಥಿತರಿದ್ದರು.


Share: