ಚಿಕ್ಕಬಳ್ಳಾಪುರ ಡಿಸೆಂಬರ್ 19: ಕರ್ನಾಟಕ ರಾಜ್ಯ ಸಹಕಾರ ಮಂಡಳ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್‌ನಿಂದ ಡಿ.೨೧ರಂದು ಸಹಕಾರಿ ಕ್ಷೇತ್ರದ ಕುರಿತು ಜಿಲ್ಲೆಯ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.
ನಗರದ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ ೧೧ ರಿಂದ ೧೨ರವರೆಗೆ ೧ ಗಂಟೆ ಕಾಲಾವಧಿಯಲ್ಲಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಶತಮಾನ ಪೂರೈಸಿರುವ ಸಹಕಾರ ಚಳವಳಿಯ ಸಾಧನೆ ಹಾಗೂ ವೈಫಲ್ಯಗಳ ವಿಷಯ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ಪ್ರತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು.
ಅದೇ ರೀತಿ ಮಧ್ಯಾಹ್ನ ೧.೩೦ಕ್ಕೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರೊ.ಎ.ವೈದ್ಯನಾಥನ್ ಸಮಿತಿಯ ಶಿಫಾರಸ್ಸಿನ ಅನುಷ್ಠಾನದಿಂದ ಮಾತ್ರ ಕೃಷಿ ಪತ್ತಿನ ವ್ಯವಸ್ಥೆ ಬಲಗೊಳ್ಳಲು ಸಾಧಯ ಎಂಬ ವಿಷಯ ಕುರಿತು ಚರ್ಚಾ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು ಹಾಗೂ ಉಪಹಾರ ವ್ಯವಸ್ಥೆ ಮಾಡಲಾಗುವುದು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅದೇ ದಿನ ಮಧ್ಯಾಹ್ನ ೩ಕ್ಕೆ ಸಹಕಾರಿ ಯೂನಿಯನ್‌ನ ಜಿಲ್ಲಾಧ್ಯಕ್ಷ ಮಳ್ಳೂರು ಶಿವಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು.
ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಕಾರಿ ಕೆ.ಮಲ್ಲಯ್ಯ ತಿಳಿಸಿದ್ದಾರೆ. ವಿವರಕ್ಕೆ ೯೭೩೮೧೦೫೯೫೬ ಅಥವಾ ೯೪೪೯೯೭೯೬೩೩ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಿದ್ದಾರೆ.