ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಸಮುದ್ರದಲೆಗೆ ಸಿಲುಕಿ ಬಾಲಕಿ ಸಾವು: ಮೂವರು ನಾಪತ್ತೆ

ಭಟ್ಕಳ: ಸಮುದ್ರದಲೆಗೆ ಸಿಲುಕಿ ಬಾಲಕಿ ಸಾವು: ಮೂವರು ನಾಪತ್ತೆ

Wed, 11 Dec 2024 06:44:53  Office Staff   S O News

ಭಟ್ಕಳ:ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ಒಟ್ಟೂ ೭ ಜನರು ಸಮುದ್ರಕ್ಕೆ ತೆರಳಿದ್ದು ಮೂವರನ್ನು ಸ್ಥಳೀಯರು ಹಾಗೂ ಲೈಫ್ ಗಾರ್ಡ ರಕ್ಷಣೆ ಮಾಡಿದ್ದು ಉಳಿದಂತೆ ನಾಲ್ವರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಅವರಲ್ಲಿ ಓರ್ವಳ ಶವ ಪತ್ತೆಯಾಗಿದ್ದು ಇನ್ನೂ ಮೂವರಿಗಾಗಿ ಹುಡುಕಾಟ ನಡೆದಿದೆ.

ಮಂಗಳವಾರ ಸಂಜೆ  ಕೋಲಾರದ ಮುಳಬಾಗಿಲಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ೪೬ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದರು. ಸಂಜೆ ಸಮುದ್ರದಂಚಿನಲ್ಲಿ ಆಟವಾಡುತ್ತಿರುವಾಗ  ಓರ್ವ ವಿದ್ಯಾರ್ಥಿನಿ ನೀರಿನಲ್ಲಿ ಕೊಚ್ಚಿ ಹೋಗಿ ಮೃತ ಪಟ್ಟಿದ್ದು ಇನ್ನೂ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಪತ್ತೆಯಆಗಿಲ್ಲ ಎನ್ನಲಾಗಿದೆ. ಮುಳುಗಿ ಮೃತಪಟ್ಟರೇ, ಮೂವರನ್ನು ಲೈಪ್ ಗಾರ್ಡ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದು ಹುಡುಕಾಟ ಮುಂದುವರೆದಿದೆ.

ಅವರಲ್ಲಿ ತೀವ್ರ ಅಸ್ವಸ್ತಗೊಂಡಿದ್ದ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ (೧೫) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋದಾ (೧೫) ವೀಕ್ಷಣಾ (೧೫) ಹಾಗೂ ಲಿಪಿಕಾ (೧೫) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಮೂವರು ವಿದ್ಯಾರ್ಥನಿಯರಾದ ದೀಕ್ಷಾ (೧೫), ಲಾವಣ್ಯ (೧೫) ಹಾಗೂ ಲಿಪಿಕಾ (೧೫) ಸಮುದ್ರದ ಅಲೆ ಹೊಡೆತಕ್ಕೆ ಆಳ ಸಮುದ್ರದಲ್ಲಿ ಕಣ್ಮರೆಯಾಗಿದ್ದು ಮುರುಡೇಶ್ವರ ಪಿ.ಎಸ್.ಐ ಹಣಮಂತ ಬಿರಾದಾರ  ಅವರ ನೇತೃತ್ವದಲ್ಲಿ ಕರಾವಳಿ ಪೊಲೀಸ್ ಪಡೆ ಹುಡುಕಾಟ ಆರಂಭಿಸಿದೆ.

ಸ್ಥಳಕ್ಕೆ ಸಹಾಯಕ ಆಯುಕ್ತೆ ಡಾ. ನಯನಾ ಎನ್. ಹಾಗೂ ತಹಸೀಲ್ದಾರ್ ಅಶೋಕ ಭಟ್ಟ ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಗೆ ಭೇಟಿ ನೀಡಿ ತೀವ್ರ ಅಸ್ವಸ್ಥಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಹಾಗೂ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ಶಿಕ್ಷಕರಲ್ಲಿ ಉಳಿದ ವಿದ್ಯಾರ್ಥಿಗಳ ಕುರಿತು ಮಾಹಿತಿ ಕಲೆ ಹಾಕಿ ಅವರಿಗೆಲ್ಲರಿಗೂ ರಾತ್ರಿ ವಸತಿ ವ್ಯವಸ್ಥೆ ಸೇರಿಂದ ಅಗತ್ಯ ವ್ಯವಸ್ಥೆ ಕಲ್ಪಿಸಲು ಕಲ್ಪಿಸಿದ್ದಾರೆ.


Share: