ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ ತಾಲೂಕಿನಲ್ಲಿ ಸಂವಿಧಾನ ಜಾಗೃತಿಜಾಥಾ ಸಂಚಾರ

ಭಟ್ಕಳ ತಾಲೂಕಿನಲ್ಲಿ ಸಂವಿಧಾನ ಜಾಗೃತಿಜಾಥಾ ಸಂಚಾರ

Sat, 24 Feb 2024 03:17:52  Office Staff   SOnews

 

ಭಟ್ಕಳ : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಭಟ್ಕಳ ತಾಲೂಕಿನ ಮುಟ್ಟಳ್ಳಿ, ಮಾರುಕೆರಿ, ಹಾಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಾಗೂ ಭಟ್ಕಳ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

 


Share: