ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

Thu, 18 Apr 2024 18:55:23  Office Staff   SOnews

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿ ಮಕ್ಕಿಯ ಸರ್ವೀಸ್ ಸ್ಟೇಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ತಡವಾಗಿ ವರದಿಯಾಗಿದ್ದು ಲಕ್ಷಾಂತರ ರೂ ನಗದು ಲೂಟಿಯಾಗಿದೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ತಡರಾತ್ರಿ ರಂಗಿನ್ ಕಟ್ಟೆಯ ಸಹಕಾರ ಸಂಘಕ್ಕೆ ನುಗ್ಗಿದ ಕಳ್ಳರು ಲಾಕರ್ ಒಡೆದು ಲಕ್ಷಾಂತರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಲಾಕರ್‌ನಲ್ಲಿ ಚಿನ್ನಾಭರಣಗಳನ್ನು ಇಡಲಾಗಿದ್ದು, ಕಳ್ಳರು ಅದನ್ನು ಮುಟ್ಟಿಲ್ಲ. ಇಬ್ಬರು ದರೋಡೆಕೋರರು ಹೆಲ್ಮೆಟ್ ಧರಿಸಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದೆ.

ಅದೇ ದಿನ ರಾತ್ರಿ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಮುರ್ಡೇಶ್ವರ ಬಸ್ತಿ ಮಕ್ಕಿಯ ಸರ್ವೀಸ್ ಠಾಣೆಯ ಅಂಗಡಿಗೆ ಕಳ್ಳರು ನುಗ್ಗಿದ್ದು, ಕಳ್ಳರ ಕುರಿತಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಂಗಳವಾರ ರಾತ್ರಿ ಚಿತ್ರಾಪುರದಲ್ಲಿ ರಥೋತ್ಸವದ ನಿಮಿತ್ತ ಪೊಲೀಸರು ಸಂಪೂರ್ಣವಾಗಿ ಬಂದೋಬಸ್ತ್ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ಕಳ್ಳರು ಇದರ ಲಾಭ ಪಡೆದುಕೊಂಡು ಕಳ್ಳತನವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.


Share: