ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ:ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಭಟ್ಕಳ:ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Sun, 03 Mar 2024 21:40:45  Office Staff   SO News

ಭಟ್ಕಳ:ಅಪರಿಚಿತ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ
ಆಸರಕೇರಿ ಯಲ್ಲಿ ನಡೆದಿದೆ.

ಸುಮಾರು 50 ರಿಂದ 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಖಾಸಗಿ ವ್ಯಕ್ತಿ ಸಂಬಂದಿಸಿದ ಜಾಗದಲ್ಲಿರುವ  ಮರಕ್ಕೆ‌ ಲುಂಗಿ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ,ಸ್ಥಳೀಯರ ಗಮನಕ್ಕೆ ಬಂದಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ನಗರ ಠಾಣೆ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರೀಸುದಾರರು ಅಥವಾ ಸಂಬಂಧಿಕರು ಇದ್ದಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ. 08385 226333,ಪಿ.ಎಸ್.ಐ +91 94808 05269


Share: