ಭಟ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದರೋರ್ವರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ.
ಮೃತರನ್ನು ಆಸರಕೇರಿಯ ನಿವಾಸಿ ನಾರಾಯಣ ಸಣ್ಣಹುಡ್ಗ ನಾಯ್ಕ(೭೦) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ನಗರದ ವೆಲ್ಪೇರ್ ಆಸ್ಪತ್ರೆಯ ಎದುರುಗಡೆಯ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹೀರೋ ಹೊಂಡಾ ಸ್ಪ್ಲೆಂಡರ್ ಪ್ಲ್‌ಸ್ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ನೆಲಕ್ಕುರುಳಿದ್ದರು, ತಕ್ಷಣ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಸಹ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಬೈಕ್ ಸವಾರ ರೈಹಾನ ಮುಹಮ್ಮದ್ ಆಶ್ರಫ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.