ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿ ವಾಲಿಬಾಲ್ ಯುನಿವರ್ಸಿಟಿ ಬ್ಲೂ

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿ ವಾಲಿಬಾಲ್ ಯುನಿವರ್ಸಿಟಿ ಬ್ಲೂ

Thu, 14 Dec 2023 02:24:56  Office Staff   SO News

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ. ಕೆ.ಎಂ. ಚಂದ್ರೇಶ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

 ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಮಂಡ್ಯದಲ್ಲಿ ಜರುಗುವ ಅಂತರ ವಿಶ್ವವಿದ್ಯಾಲಯ-ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡೆಯಲ್ಲಿ ದಕ್ಷಿಣವಲಯವನ್ನು ಪ್ರತಿನಿಧಿಸಲಿದ್ದು, ಈ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್  ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿದ್ದಾರೆ


Share: