ಭಟ್ಕಳ: ಪ್ರತಿಷ್ಟಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಶ್ರೀಗುರು ಸುಧೀಂದ್ರ ಕಾಲೇಜಿನ ಪದವಿ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದುಕೊಂಡಿದ್ದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಪ್ರಾಚಾರ್ಯ ಶ್ರೀನಾಥ್ ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯದ 2024 ನೇ ಸಾಲಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ, 2023-24 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಬಿಬಿಎ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕುಮಾರಿ ವೃಂದಾ ಆರ್ ಜೋಗಿ, ಬಿಸಿಎ ವಿಭಾಗದಲ್ಲಿ ತೃತೀಯ ರ‍್ಯಾಂಕ್ ಪಡೆದ ಕುಮಾರಿ ದೀಕ್ಷಾ ಖಾರ್ವಿ ಯವರಿಗೆ ಪದಕ ಸಹಿತ ರ‍್ಯಾಂಕ್ ಫಲಕವನ್ನು, 2022-23 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಬಿ.ಕಾಂ ಕೋರ್ಸನಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ. ಮಹಾಲಕ್ಷ್ಮಿ ಕಾಮತ ಇವರಿಗೆ ಡಾ. ಡಿ.ಸಿ.ಪಾವಟೆ ಗೋಲ್ಡನ್ ಜ್ಯುಬಿಲಿ ಸ್ಕಾಲರಶಿಫ್ ಅನ್ನು ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಸಚಿವರು ಪ್ರದಾನಿಸಿದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.