ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ತ್ರಿಶಾ ಖಾರ್ವಿ, ಕರಾಟೆ ಯುನಿವರ್ಸಿಟಿ ಬ್ಲೂ

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ತ್ರಿಶಾ ಖಾರ್ವಿ, ಕರಾಟೆ ಯುನಿವರ್ಸಿಟಿ ಬ್ಲೂ

Thu, 11 Jan 2024 00:38:58  Office Staff   S O News

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ, ಭಟ್ಕಳ ತಾಲೂಕಿನ ಬಂದರ-ಮಾವಿನಕುರ್ವೆಯ ತ್ರಿವೇಣೀ ಖಾರ್ವಿ ಹಾಗೂ ವಿಷ್ಣು ಖಾರ್ವಿ ಯವರ ಪುತ್ರಿ ಕುಮಾರಿ. ತ್ರಿಶಾ ಖಾರ್ವಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ಮಧ್ಯಪ್ರದೇಶ ರಾಜ್ಯದ ಭೂಪಾಲ್‍ದಲ್ಲಿ ಜರುಗುವ ಅಂತರ ವಿಶ್ವವಿದ್ಯಾಲಯ-ರಾಷ್ಟ್ರಮಟ್ಟದ ಕರಾಟೆ ಕ್ರೀಡೆಯಲ್ಲಿ ದಕ್ಷಿಣವಲಯವನ್ನು ಪ್ರತಿನಿಧಿಸಲಿದ್ದು, ಈ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‍ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.


Share: