ಭಟ್ಕಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಅಹಿತ ಘಟನೆಗಳು ಭಟ್ಕಳದಲ್ಲಿ ಮರುಕಳಿಸುತ್ತಿದ್ದು ಇದಕ್ಕಾಗಿ ಇಲ್ಲಿನ ಪೊಲೀಸ್ ಸಿಬ್ಬಂಧಿಗಳಿಗೆ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಎಂ.ಬಿ.ಬೋರಲಿಂಗಯ್ಯ ಹೇಳಿದರು.
ಅವರು ಗುರುವಾರ ಸಂಜೆ ಭಟ್ಕಳ ನಗರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾಮಾಜಿಕ ಜಾಲಾತಾಣಗಳ ಮೂಲಕ ಕಾನೂನೂ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದ ಅವರು, ಜನರನ್ನು ಪ್ರಚೋದಿಸುವ ಪ್ರಯತ್ನ ನಡೆದರೆ ಅದಕ್ಕೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಅವರು ಎಚ್ಚರಿಕೆಯನ್ನು ನೀಡಿದರು. ಭಟ್ಕಳದಲ್ಲಿ ಎಲ್ಲ ಧಾರ್ಮಿಕ ಮತ್ತು ರಾಜಕೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣವರ್ಧನ, ಡಿವೈಎಸ್ಪಿ ಮಹೇಶ, ಸಿಪಿಐ ಗೋಪಾಲಕೃಷ್ಣ, ಸಿಪಿಐ ಚಂದನ್ ಮತ್ತಿತರರು ಇದ್ದರು.