ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಭಟ್ಕಳದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

Thu, 08 Feb 2024 01:37:30  Office Staff   S O News

ಭಟ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಭಟ್ಕಳ ಇದರ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಹೆಣ್ಣು ಮಕ್ಕಳನ್ನು ನಿರ್ಲಕ್ಷ್ಯ ಮಾಡದೇ ಆರೈಕೆ ಮಾಡಬೇಕು. ಹೆಣ್ಣು ಮಕ್ಕಳ ಜನನ, ಭ್ರೂಣ ಹತ್ಯೆ ನಿಷೇಧಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಕಾರ್ಯಕ್ರಮದ ಅಂಗವಾಗಿ ರವಿವಾರ ಮತ್ತು ಸೋಮವಾರ ಹೆಣ್ಣು ಮಕ್ಕಳಿಗೆ ಜನನ ನೀಡಿದ ತಾಯಂದಿರಿಗೆ ತೆಂಗಿನ ಸಸಿ, ಹೂವಿನ ಕುಂಡ, ಸಿಹಿ ತಿಂಡಿ ನೀಡಿ ಶುಭಾಶಯ ಕೋರಲಾಯಿತು.

ಈ ಸಂದರ್ಭದಲ್ಲಿ ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸುಶೀಲಾ ಮೊಗೇರ ಮೊದಲಾದವರು ಉಪಸ್ಥಿತರಿದ್ದರು. 


Share: