ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

Thu, 27 Jun 2024 04:37:27  Office Staff   SOnews

ಹೊಸದಿಲ್ಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕಗೊಂಡಿದ್ದಾರೆ.  

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಮರುನೇಮಕಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಪಿತ್ರೋಡಾ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು


Share: