ಚಿಕ್ಕಬಳ್ಳಾಪುರ ಡಿಸೆಂಬರ್ ೦೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ ೩ ರಂದು ಬೆಳಿಗ್ಗೆ ೧೧ ಗಂಟೆಗೆ ಶ್ರೀ ಕೆ.ವಿ.ಟ್ರಸ್ಟ್, ಸಿ.ವಿ.ವಿ ಕ್ಯಾಂಪಸ್‌ನಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ.ಪಿ.ಬಚ್ಚೇಗೌಡ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಎಂ.ವೀರಪ್ಪ ಮೊಯ್ಲಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಹೆಚ್.ಮುನಿಯಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿನುತ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಚೆಂಡೂರು ವಿ.ವೆಂಕಟೇಶ್, ಶಾಸಕರಾದ ವಿ.ಮುನಿಯಪ್ಪ, ಎನ್.ಹೆಚ್.ಶಿವಶಂಕರರೆಡ್ಡಿ, ಎನ್.ಸಂಪಂಗಿ, ಡಾ|| ಎಂ.ಸಿ.ಸುಧಾಕರ್, ಮುಖ್ಯ ಸಚೇತಕರು, ವಿಧಾನ ಪರಿಷತ್ ಡಾ|| ಎ.ಹೆಚ್.ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ವಿ.ಆರ್.ಸುದರ್ಶನ್, ನಜೀರ್ ಅಹಮದ್, ಡಿ.ಎಸ್.ವೀರಯ್ಯ, ವೈ.ಎ.ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷ ಎಂ.ಪ್ರಕಾಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಳಿನಿ ಗೌಡ, ಜಿಲ್ಲಾಧಿಕಾರಿ ಅನ್ವರ್ ಪಾಷ, ಜಿ.ಪಂ. ಮುಖ್ಯಕಾರ್ಯನಿರ್ವಣಾಧಿಕಾರಿ ಎನ್.ಕೃಷ್ಣಪ್ಪ ಭಾಗವಹಿಸುವರು.