ಭಟ್ಕಳ, ಫೆಬ್ರವರಿ 17:ಬೆಳಗಾವಿ ಜಿಲ್ಲೆ ಸವದತ್ತಿಯ ಎನ್‌ಕರೇಜ್ ಗ್ರಾಮೀಣ ಮತ್ತು ಶೈಕ್ಷಣಿಕ ಅಭಿವೃದ್ದಿ ಸಂಸ್ಥೆಯು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಟ್ಕಳದ ಕರಿಕಲ್‌ನ ರಿಧಮ್ ಡಾನ್ಸ ಅಕಾಡೆಮಿಯ ನೃತ್ಯ ತಂಡ ದ್ವಿತೀಯ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.
ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ 50 ಕ್ಕೂ ಅಧಿಕ ತಂಡಗಳು ಪಾಲ್ಗೊಂಡಿದ್ದರೂ ಸಹ ರಿಧಮ್ ತಂಡದ ಹುಡುಗರು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು 31,111 ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದಾರೆ. ಈಗಾಗಲೇ ರಾಜ್ಯದಲ್ಲಿ ನಡೆದ ಹಲವಾರು ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಶಸ್ತಿಯನ್ನು ಬಾಚಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ದ್ವಿತೀಯ ಸ್ಥಾನ ಗಳಿಸುವಲ್ಲಿ ಯಶಸ್ವಿಯಾದ ನೃತ್ಯಗಾರರನ್ನು ಹಾಗೂ ತರಬೇತಿದಾರರನ್ನು ತಂಡದ ಅಧ್ಯಕ್ಷ ಜನಾರ್ಧನ ಮೊಗೇರ,ಗೌರವಾಧ್ಯಕ್ಷ ತಿಮ್ಮಪ್ಪ ಮೊಗೇರ, ಉಪಾಧ್ಯಕ್ಷರಾದ ಭಾಸ್ಕರ ಅಳವೆಕೋಡಿ,ಕಾರ್ಯದರ್ಶಿ ಗಜಾನನ ವೆಂಕಟಾಪುರ, ಸಲಹೆಗಾರರಾದ ಶ್ರೀಧರ ಮೊಗೇರ ಅಭಿನಂದಿಸಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದ್ದಾರೆ.