ಹಾಸನ, ಡಿಸೆಂಬರ್ 17: ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬಹುಜನ ರೈತರ ಮೇಲೆ ಪದೇ ಪದೇ ಬಿ.ಜೆ.ಪಿ.ಸರ್ಕಾರವು ದೌರ್ಜನ್ಯ ಮಾಡುತ್ತಿದ್ದು ಇದನ್ನು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಎ.ಪಿ.ಅಹಮದ್ ಖಂಡಿಸಿದ್ದಾರೆ.
ರಾಜ್ಯದಲ್ಲಿ ಶ್ರೀಮಂತರ ಕುಮ್ಮುಕ್ಕಿನಿಂದ ಬಹುಜನ ರೈತರ ಮೇಲೆ ಹಲ್ಲೆ ದೌರ್ಜನ್ಯ ನಡೆಯುತ್ತಲೇ ಇದೆ. ಹಲ್ಲೆ ಮತ್ತು ದೌರ್ಜನ್ಯ ಮಾಡಿದ ಅಧಿಕಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಸಿದರು.
ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದು ನಿರಂತರವಾಗಿ ಬಹುಜನ ರೈತರ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.