ಬೆಂಗಳೂರು, ಏಪ್ರಿಲ್ ೨೩ (ಕರ್ನಾಟಕ ವಾರ್ತೆ) - ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳ ತಂಡ ಆಯೋಗದ ಅಧಿಕಾರಿಗಳೊಂದಿಗೆ ಏಪ್ರಿಲ್ ೨೬ ರಂದು ನಗರಕ್ಕೆ ಆಗಮಿಸಲಿದೆ
ಏಪ್ರಿಲ್ ೨೭ ರಂದು ಆಯೋಗವು ರಾಜ್ಯ ಪರಿಶಿಷ್ಟ ಜಾರಿಗೆ ಸೇರಿದ ಎಲ್ಲಾ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿನ ಪರಿಶಿಷ್ಠ ಜಾತಿ ನೌಕರರುಗಳ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳೊಂದಿಗೆ ಪರಿಶಿಷ್ಟ ಜಾತಿಯವರ ಸಮಸ್ಯೆ ಹಾಗೂ ಕುಂದುಕೊರತೆಗಳ ಕುರಿತು ಸಭೆ ನಡೆಸಲಿದೆ.
ನಂತರ ರಾಜ್ಯದ ಸಮಾಜ ಕಲ್ಯಾಣ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಜನರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಲಿದೆ.
ಏಪ್ರಿಲ್ ೨೮ ರಂದು ೧೧.೦೦ ಗಂಟೆಗೆ ಪರಿಶಿಷ್ಟ ಜಾತಿ ಜನರ ಮೇಲಿನ ದೌರ್ಜನ್ಯ ಮತ್ತು ಅವರ ಸೇವಾ ಸುರಕ್ಷತೆ ಬಗ್ಗೆ ರಾಜ್ಯದ ಸಮಾಜ ಕಲ್ಯಾಣ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ ಎಂದು ಸಮಾಜ ಕಲ್ಯಾ ಇಲಾಖೆ ಪ್ರಕಟಣೆ ತಿಳಿಸಿದೆ.