ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮೇ 31 ವಿಶ್ವ ತಂಬಾಕು ರಹಿತ ದಿನ; ಜಿಲ್ಲೆಯಲ್ಲಿ ತಂಬಾಕು ದುಷ್ಪರಿಣಾಮಗಳ ನಿಯಂತ್ರಣಕ್ಕೆ ವಿವಿಧ ಕಾರ್ಯಕ್ರಮ

ಮೇ 31 ವಿಶ್ವ ತಂಬಾಕು ರಹಿತ ದಿನ; ಜಿಲ್ಲೆಯಲ್ಲಿ ತಂಬಾಕು ದುಷ್ಪರಿಣಾಮಗಳ ನಿಯಂತ್ರಣಕ್ಕೆ ವಿವಿಧ ಕಾರ್ಯಕ್ರಮ

Fri, 31 May 2024 04:34:10  Office Staff   SOnews

 

ವಿಶ್ವ ಆರೋಗ್ಯ ಸಂಸ್ಥೆಯು ಮೇ 31 ರಂದು ವಿಶ್ವ ತಂಬಾಕು ರಹಿತ ದಿನವೆಂದು ಘೋಷಣೆ ಮಾಡಿದೆ. ವಿಶ್ವ ತಂಬಾಕು ರಹಿತ ದಿನದ 2024 ಧ್ಯೇಯ ವಾಕ್ಯತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು”. ಹಾನಿಕಾರಕ ತಂಬಾಕು ಉತ್ಪನ್ನಗಳು ಮತ್ತು ಸುಳ್ಳು ಜಾಹೀರಾತುಗಳಿಂದ ಯುವಕರನ್ನು ರಕ್ಷಿಸುವ ಬಲವಾದ ನಿಯಮಗಳನ್ನು ಜಾರಿಗೆ ತರಲು ಅಂತರರಾಷ್ಟಿçà ಪ್ರಯತ್ನಗಳನ್ನು ಸಜ್ಜುಗೊಳಿಸುವುದರ ಅಗತ್ಯತೆಯ ಬಗ್ಗೆ ಒತ್ತನ್ನು ನೀಡಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ನಿಯಂತ್ರಣಕ್ಕೆ ಕಳೆದ ಒಂದು ವರ್ಷದಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೋಟ್ಪಾ-2003 ಕಾಯ್ದೆಯಡಿ ಈವರೆಗೂ ಒಟ್ಟೂ 57 ತಂಬಾಕು ದಾಳಿಗಳನ್ನು ನಡೆಸಿದ್ದು, ಸೆಕ್ಷನ್ 4 ಅಡಿ 544 ಪ್ರಕರಣ ಹಾಗೂ ರೂ.88,990/- ದಂಡ , ಸೆಕ್ಷನ್ 6() ಅಡಿ 351 ಪ್ರಕರಣಗಳು ಹಾಗೂ ರೂ.49,000/- ದಂಡ , ಸೆಕ್ಷನ್ 6(ಬಿ) ಅಡಿಯಲ್ಲಿ 59 ಪ್ರಕರಣಗಳು ಹಾಗೂ ರೂ.10,300/- ದಂಡ ವಿಧಿಸಿದ್ದು, ಒಟ್ಟೂ 954 ಪ್ರಕರಣಗಳಲ್ಲಿ ರೂ.1,48,290/- ದಂಡ ವಸೂಲಿ ಮಾಡಲಾಗಿದೆ.

 ರಾಷ್ಟಿçà ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಏಪ್ರಿಲ್ 2023 ರಿಂದ ಮಾರ್ಚ್ 2024 ರವರೆಗೆ 80 ಶಾಲೆಗಳು ಮತ್ತು 20 ಕಾಲೇಜುಗಳ ಸೇರಿದಂತೆ ಒಟ್ಟೂ 100 ಶೈಕ್ಷಣಿಕ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ-2003 ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಗಿದೆ.

 ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ-2003 ಕಾಯ್ದೆಯ ಅನುಷ್ಠಾನದ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಕುಮಟಾ ತಾಲೂಕಿನ ತಾಲೂಕು ತನಿಖಾದಳದ ಸದಸ್ಯರಿಗೆ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳಿಗೆ, ಭಟ್ಕಳ ತಾಲೂಕಿನ ತಂಬಾಕು ಮಾರಾಟಗಾರರಿಗೆ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಮತ್ತು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ, ಆರೋಗ್ಯ ವೃತ್ತಿಪರರಿಗೆ (ಎಸ್.ಟಿ.ಎಲ್.ಎಸ್., ಎಸ್.ಟಿ.ಎಸ್., ಟಿ.ಬಿ.ಹೆಚ್.ವಿ., .ಸಿ.ಟಿ.ಸಿ. ಕೌನ್ಸೆಲರ್ ಮತ್ತು ಎಸ್.ಟಿ.ಡಿ. ಕೌನ್ಸೆಲರ್), ಯಲ್ಲಾಪುರ ಮತ್ತು ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

 ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ರೀತಿಯ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಪಾ-2003 ಕಾಯ್ದೆಯ ಕುರಿತು ಮಾಹಿತಿ ಶಿಕ್ಷಣ ಮತ್ತು ಸಂವಹನ (..ಸಿ.) ಚಟುವಟಿಕೆಳನ್ನು ಕೈಗೊಂಡಿದ್ದು, ದಿನಾಂಕ:-31-05-2023 ರಂದುನಮಗೆ ಆಹಾರ ಬೇಕು, ತಂಬಾಕು ಅಲ್ಲಎಂಬ ಧ್ಯೇಯ ವಾಕ್ಯದೊಂದಿಗೆ ‘31ನೇ ಮೇ ವಿಶ್ವ ತಂಬಾಕು ರಹಿತ ದಿನವನ್ನುಆಚರಿಸಿದ್ದು, ದಿನಾಚರಣೆಯ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು, ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಮತ್ತು ದಂತ ತಪಾಸಣೆ ನಡೆಸಿ, ಅವಶ್ಯಕತೆ ಇರುವವರಿಗೆ ಆಪ್ತ ಸಮಾಲೋಚನೆ ನಡೆಸಿ ನಿಕೋಟೆಕ್ಸ್ ಗಮ್ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲೆಯ ಎಲ್ಲಾ 11 ತಾಲೂಕುಗಳಲ್ಲಿ ತಾಲೂಕಾಡಳಿತದ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಆಧಾರಿತ ಜಾಗೃತಿ, ಜಾಥಾ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

 ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿವಿಶ್ವ ತಂಬಾಕು ರಹಿತ ದಿನದಅಂಗವಾಗಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗಿದೆ.

 ಜಿಲ್ಲೆಯಾದ್ಯಂತ ಎಲ್ಲಾ 11 ತಾಲೂಕುಗಳಲ್ಲಿ ಏಕಕಾಲದಲ್ಲಿ ತಂಬಾಕು ದಾಳಿ ನಡೆಸಿ ಕೋಟ್ಪಾ-2003 ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಗಿದ್ದು, ಜೊಯಿಡಾ ತಾಲೂಕಿನಲ್ಲಿ ವಿಶೇಷವಾಗಿ ಎಲ್ಲಾ 6 ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ತಂಬಾಕು ದಾಳಿ ನಡೆಸಲಾಗಿದೆ.

ನಗರಸಭೆ ಮತ್ತು ಪಂಚಾಯಿತಿ ಮಟ್ಟದ ಎಲ್ಲಾ ಸ್ವಚ್ಛ ವಾಹಿನಿಗಳಲ್ಲಿ ತಂಬಾಕು ಸೇವನೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ-2003 ಕಾಯ್ದೆಯ ಕುರಿತು ಜಿಂಗಲ್ಸ್ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ..

 ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ-2003 ಕಾಯ್ದೆಯ ಕುರಿತು ಅಂಕೋಲಾದಲ್ಲಿ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ ಸಿಬ್ಬಂದಿಗಳಿಗೆ, ಚಾಲಕರು, ನಿರ್ವಾಹಕರಿಗೆ ಮತ್ತು ಪ್ರಾ..ಕೇಂದ್ರ ಬೆಳಸೆಯಲ್ಲಿ ಸಾರ್ವಜನಿಕರಿಗೆ ಹಾಗೂ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ, ಅಮದಳ್ಳಿಯಲ್ಲಿ ವಿದ್ಯಾರ್ಥಿಗಳು, ಪಾಲಕರಿಗೆ ಹಾಗೂ ಜಿಲ್ಲಾ ಕಾರಾಗೃಹದಲ್ಲಿ ಸಿಬ್ಬಂದಿಗಳಿಗೆ ಮತ್ತು ಜೈಲು ವಾಸಿಗಳಿಗೆ ಅರಿವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿದೆ.

ತಂಬಾಕು ವ್ಯಸನಕ್ಕೊಳಗಾದವರಿಗೆ ತಂಬಾಕು ಸೇವನೆಯನ್ನು ತ್ಯಜಿಸಲು ಸಹಾಯಕವಾಗುವಂತೆ ನಿಕೋಟಿನ್ ಗಮ್ಸ್ ಲಭ್ಯವಿದ್ದು, ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಯ ದಂತವೈದ್ಯ ವಿಭಾಗ ವತಿಯಿಂದ ಒಟ್ಟೂ 529 ವ್ಯಸನಿಗಳಿಗೆ ಆಪ್ತ ಸಮಾಲೋಚನೆ ನಡೆಸಿ ನಿಕೋಟೆಕ್ಸ್ ಗಮ್ಸ್ಗಳನ್ನು ವಿತರಿಸಲಾಗಿದೆ. ರಾಷ್ಟಿçà ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಯ ಸದಸ್ಯರೊಂದಿಗೆ ನಡೆಸಲಾಗಿದೆ. ಅದೇ ರೀತಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸದಸ್ಯರೊಂದಿಗೆ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ನಡೆಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿತಂಬಾಕು ಮುಕ್ತ ಯುವಪೀಳಿಗೆ ಪರಿಕಲ್ಪನೆಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಗಿದೆ.

ಮೇ 31 (ನಾಳೆ) ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ, ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕು.. ಅಧಿಕಾರಿಗಳ ಕಛೇರಿ ಸಭಾಭವನದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸ್ಕಿಟ್ನ್ನು ಮಾಡಲಾಗುವುದು. ಸದರಿ ದಿನದ ಪ್ರಯುಕ್ತ ಏಕಕಾಲದಲ್ಲಿ ಎಲ್ಲಾ ತಾಲೂಕುಗಳಲ್ಲಿ ತಂಬಾಕು ದಾಳಿ ನಡೆಸಲಾಗುವುದು. ತಾಲೂಕು ಆಸ್ಪತ್ರೆಗಳಲ್ಲಿ ದಂತ ಆರೋಗ್ಯ ಅಧಿಕಾರಿಗಳಿಂದ ಓರಲ್ ಸ್ಕಿçÃನಿಂಗ್, ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಗುಂಪು ಚರ್ಚಾ ಕಾರ್ಯಕ್ರಮ, ಶಾಲೆ ಮತ್ತು ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ, ರೇಡಿಯೋ ಟಾಕ್ ಹಮ್ಮಿಕೊಳ್ಳಲಾಗುವುದು. ತಾಲೂಕು ಮಟ್ಟದಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ವಿವಿಧ ಇಲಾಖೆ ಮತ್ತು ಸಂಘ-Aಸ್ಥೆಗಳ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನವನ್ನು ಆಚರಣೆ ಮಾಡಲಾಗುತ್ತಿದೆ.


Share: