ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್‌ಗಳು 10 ದಿನ NIA ವಶಕ್ಕೆ!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್‌ಗಳು 10 ದಿನ NIA ವಶಕ್ಕೆ!

Sun, 14 Apr 2024 19:09:16  Office Staff   S O News

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ  ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಇಬ್ಬರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.


Share: