ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ರಾಷ್ಟ್ರ ಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಬೆಳಕೆ ನಾಗೇಂದ್ರ ನಾಯ್ಕ ತೃತೀಯ ಸ್ಥಾನ

ರಾಷ್ಟ್ರ ಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಬೆಳಕೆ ನಾಗೇಂದ್ರ ನಾಯ್ಕ ತೃತೀಯ ಸ್ಥಾನ

Fri, 04 Oct 2024 04:45:24  Office Staff   S O News

ಭಟ್ಕಳ: ೪ನೇ ಭಾರತೀಯ ಓಪನ್ ಯು-೨೩ ಅಥ್ಲೆಟಿಕ್ಸ್ ಸ್ಪರ್ಧೆ ೨೦೨೪ರ ಜೂನಿಯರ್ ಮತ್ತು ಅಂಡರ್ -೨೩ ಕ್ರೀಡಾಕೂಟದ ರಾಷ್ಟ್ರಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಭಟ್ಕಳದ ಬೆಳಕೆ ಅಬ್ಬಿಹಿತ್ಲು ನಿವಾಸಿ ನಾಗೇಂದ್ರ ಅಣ್ಣಪ್ಪ ನಾಯ್ಕ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪ್ರಸ್ತುತ ಇವರು ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಸೆ ೨೮ ರಿಂದ ೩೦ ರವರೆಗೆ ನಡೆದ ಸ್ಪರ್ಧೆಯಲ್ಲಿ ದೇಶದ ವಿವಿದ ರಾಜ್ಯಗಳಿಂದ ಸಾವಿರಾರು ಕ್ರೀಡಾಪಟುಗಳು ಭಾಗಿಯಾಗಿದ್ದರು. ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಇವರು ೫೧.೯೮  ದೂರ ಎಸೆದು ತೃತೀಯ ಸ್ಥಾನ ಪಡೆದು ಅಂತರಾಷ್ಟ್ರೀಯ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.


Share: