ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Wed, 26 Jun 2024 22:09:44  Office Staff   SOnews

ಬೆಂಗಳೂರು : ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿದೆ.  

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿರುವ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪೀಠ ಮೇಲಿನ ಆದೇಶ ನೀಡಿದೆ.  ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು‌. ಹೀಗಾಗಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.


Share: