ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆ

Mon, 05 Aug 2024 02:40:36  Office Staff   S O News

ಬೆಂಗಳೂರು: ಪ್ರವಾಹ ಪೀಡಿತ ವಯನಾಡ್‍ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದರು.

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.

ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.


Share: