ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿವಿಧ ನಿಗಮ ಮಂಡಳಿಗಳ ಸ್ಪರ್ಧಾತ್ಮಕ ಪರೀಕ್ಷೆಯ ವಸ್ತ್ರ ಸಂಹಿತೆ ಹಾಗೂ ಅಭ್ಯರ್ಥಿಗಳಿಗೆ ಸೂಚನೆ

ವಿವಿಧ ನಿಗಮ ಮಂಡಳಿಗಳ ಸ್ಪರ್ಧಾತ್ಮಕ ಪರೀಕ್ಷೆಯ ವಸ್ತ್ರ ಸಂಹಿತೆ ಹಾಗೂ ಅಭ್ಯರ್ಥಿಗಳಿಗೆ ಸೂಚನೆ

Sun, 29 Oct 2023 00:27:13  Office Staff   S O News

ಕಾರವಾರ:  ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ, ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಕೆಳಗಿನ ವಸ್ತ್ರ ಸಂಹಿತ ಹಾಗೂ ವಿಶೇಷ ಸೂಚನೆಗಳನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

 ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಮ್ಮಿ ಜೇಬುಗಳಿರುವ) ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ, ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‍ಗಳು ,ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿ ಸಲಾಗಿದೆ. 

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿμÉೀಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಲೋಹದ ಆಭರಣಗಳನ್ನು ಯಾವುದೇ ಕಾರಣಕ್ಕೂ ಧರಿಸಬಾರದು, ಹಿಜಾಬ್ ಧರಿಸಿದಲ್ಲಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಬಂದು ತಪಾಸಣೆಗೆ ಒಳ ಪಡಬೇಕಾಗುತ್ತದೆ.

ನಿಷೇಧಿತ ವಸ್ತುಗಳ ಪಟ್ಟಿ - ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಈ ಮುಂದೆ ಪಟ್ಟಿ ಮಾಡಲಾದ ಯಾವುದೇ ನಿμÉೀಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೆÇೀನ್‍ಗಳು, ಪೆನ್ ಡ್ರೈವ್‍ಗಳು, ಇಯರ್ ಫೆÇೀನ್‍ಗಳು, ಮೈಕ್ರೋಫೆÇೀನ್‍ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿμÉೀಧಿಸಲಾಗಿದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.

ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ , ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸುವುದನ್ನು ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು / ಸಾಧನವನ್ನು ಧರಿಸುವುದನ್ನು ನಿμÉೀೀಧಿಸಿದೆ. ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ. ಪ್ರವೇಶ ಪತ್ರ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಎರಡು ಇತ್ತೀಚಿನ ಪಾಸ್ ಪೆÇೀರ್ಟ್ ಅಳತೆಯ ಪೆÇೀಟೋವನ್ನು ತರುವುದು. ಸರ್ಕಾರದಿಂದ ಮಾನ್ಯವಾದ ಫೆÇೀಟೋ ಗುರುತಿನ ಚೀಟಿಯನ್ನು ತರುವುದು  ಖಡ್ಡಾಯಗೊಳಿಸಲಾಗಿದೆ. ಪಾರದರ್ಶಕವಾದ (ಲೇಬಲ್ ರಹಿತ) ಕುಡಿಯುವ ನೀರಿನ ಬಾಟಲ್‍ಗಳನ್ನು ತರಲು ಅನುಮತಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಪರೀಕ್ಷಾ ಕೇಂದ್ರದ ಸುತ್ತ ಮುತ್ತಲಿನ 200 ಮೀ, ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ, 144 ರನ್ವಯ ನಿμÉೀಧಾಜ್ಞೆಯನ್ನು ಹೊರಡಿಸುವುದರಿಂದ ಅಭ್ಯರ್ಥಿಗಳ ಪಾಲಕರು/ಸಂಬಂಧಿಕರು/ಪೆÇೀಷಕರು ಪರೀಕ್ಷಾ ಕೇಂದ್ರದ ಮುಂಭಾಗ ಅಥವಾ ಆಸು ಪಾಸಿನಲ್ಲಿ ನಿಲ್ಲತಕ್ಕದ್ದಲ್ಲ. ಪರೀಕ್ಷೆ ಮುಕ್ತಾಯವಾಗುವವರೆಗೆ ಅಭ್ಯರ್ಥಿಗಳು ಹೊರಗೆ ಬರದೇ ಇರುವುದರಿಂದ ಅಂತಹ ಪಾಲಕರನ್ನು ಸದ್ರಿ ಸ್ಥಳದಿಂದ ತೆರವುಗೊಳಿಸುವ ಬಗ್ಗೆ ಪೆÇಲೀಸ್ ಇಲಾಖೆಯಿಂದ ಕ್ರಮ ಜರುಗಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ವಿಡಿಯೋ ಸಂವಾದ ಸಭೆಯಲ್ಲಿ ನಿರ್ದೇಶಿಸಿದಂತೆ ವಿಳಂಭವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಪ್ರವೇಶ ನಿಭರ್ಂಧಿಸುವಂತೆ ನಿರ್ದೇಶನ ನೀಡಿದ್ದು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಮೇಲ್ಕಂಡ ಎಲ್ಲಾ ಸೂಚನೆಗಳನ್ನು ವಿವರವಾಗಿ ಅರ್ಥೈಸಿಕೊಂಡು, ಯವುದೇ ಗೊಂದಲಗಳಿಗೆ ಆಸ್ಪದ ನೀಡದೇ ಕರ್ತವ್ಯ ನಿರ್ವಹಿಸುವಂತೆ ಹಾಗೂ ಎಲ್ಲಾ ಪರೀಕ್ಷಾರ್ಥಿಗಳು ಹಾಗೂ ಪೆÇೀಷಕರು ಎಲ್ಲಾ ಸೂಚನೆಗಳನ್ನು ತಪ್ಪದೇ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


Share: