ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಶಿಗ್ಗಾಂವಿ: ಬ್ಯಾಲೆಟ್ ಬಾಕ್ಸ್‌ ಗಳು ಚರಂಡಿಯಲ್ಲಿ ಪತ್ತೆ; ಉಪಚುನಾವಣೆ ಮುಗಿದ ಮರುದಿನವೇ ನಡೆದ ಘಟನೆ

ಶಿಗ್ಗಾಂವಿ: ಬ್ಯಾಲೆಟ್ ಬಾಕ್ಸ್‌ ಗಳು ಚರಂಡಿಯಲ್ಲಿ ಪತ್ತೆ; ಉಪಚುನಾವಣೆ ಮುಗಿದ ಮರುದಿನವೇ ನಡೆದ ಘಟನೆ

Fri, 15 Nov 2024 18:38:44  Office Staff   Vb

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಜಿಲ್ಲೆಯ ಯತ್ತಿನಹಳ್ಳಿ ಗ್ರಾಮದ ಬಳಿಯ ಲೇಔಟ್ ವೊಂದರಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಗುರುವಾರ ಪತ್ತೆಯಾಗಿವೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರವಷ್ಟೇ ಮುಗಿದಿದೆ. ಇದರ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಸಿಕ್ಕಿವೆ. ಇದರಿಂದ ಗ್ರಾಮಸ್ಥರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಯತ್ತಿನಗಳ್ಳಿ ಗ್ರಾಮದ ಬಳಿ ನಿರುಪಯುಕ್ತ ಬ್ಯಾಲೆಟ್ ಬಾಕ್ಸ್ ಪತ್ತೆಯಾಗಿದ್ದು, ಬಳಕೆಯಲ್ಲಿ ಇಲ್ಲದ ಬ್ಯಾಲೆಟ್ ಬಾಕ್ಸ್‌ಗಳನ್ನು ಎಪಿಎಂಸಿ ಗೋದಾಮಿನಲ್ಲಿ ಇರಿಸಲಾಗಿತ್ತು. ಈ ಬಾಕ್ಸ್ ಗಳು ಬಳಕೆಯಲ್ಲಿ ಇರಲಿಲ್ಲ. ಶಿಗ್ಗಾಂವಿ ಉಪಚುನಾವಣೆಗೂ ಈ ಬಾಕ್ಸ್‌ಗಳಿಗೂ ಸಂಬಂಧ ಇಲ್ಲ ಎಂದ ಕಂದಾಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಾವೇರಿ ನಗರದ ಎಪಿಎಂಸಿಯಲ್ಲಿ ಇರುವ ಒಂದು ಹಳೇ ಗೋದಾಮಿನಲ್ಲಿ ಹಳೇ ನಿರುಪಯುಕ್ತ ಬ್ಯಾಲೆಟ್ ಬಾಕ್ಸ್ ಗಳನ್ನು ಇಡಲಾಗಿತ್ತು. ಇದನ್ನು ಕಂದಾಯ ಇಲಾಖೆಯವರು ಹಲವು ವರ್ಷಗಳ ಹಿಂದೆ ತಂದಿಟ್ಟಿದ್ದರು ಎನ್ನಲಾಗಿದೆ. ಅಲ್ಲದೆ, ಇದೇ ಗೋದಾಮಿನಿಂದ ಕಿಡಿಗೇಡಿಗಳು ಬಾಕ್ಸ್‌ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.


Share: