ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಮೈಸೂರು: ಮಾರ್ಚ್ 17 ರಿಂದ 19 ರವರೆಗೆ ಮೈಸೂರು ವಿಭಾಗ ಮಟ್ಟದ ಯುವಜನ ಮೇಳ

ಮೈಸೂರು: ಮಾರ್ಚ್ 17 ರಿಂದ 19 ರವರೆಗೆ ಮೈಸೂರು ವಿಭಾಗ ಮಟ್ಟದ ಯುವಜನ ಮೇಳ

Thu, 11 Mar 2010 18:18:00  Office Staff   S.O. News Service

ಮೈಸೂರು, ಮಾ. ೧೧ (ಕರ್ನಾಟಕ ವಾರ್ತೆ) - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ೨೦೦೯-೧೦ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು ಮೈಸೂರು ನಗರದ ಟೌನ್ ಹಾಲ್ ಆವರಣದಲ್ಲಿ ಮಾರ್ಚ್ ೧೭ ರಿಂದ ೧೯ರವರೆಗೆ ಏರ್ಪಡಿಸಲಾಗಿದೆ. ಮೈಸೂರು ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ದಿನಾಂಕ ೧೭.೩.೨೦೧೦ರಂದು ಬೆಳಿಗ್ಗೆ ೧೧ ಗಂಟೆಯ ಒಳಗೆ ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸಂಘಟಿಕರಲ್ಲಿ ವರದಿ ಮಾಡಿಕೊಳ್ಳುವಂತೆ ಶ್ರೀ ಕೆ. ಸುರೇಶ್, ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು

ಕ್ರೀಡಾ ಇಲಾಖೆ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಕನ್ನಡ ಪ್ರವೇಶ ಪರೀಕ್ಷೆಗಳ ಫಲಿತಾಂಶ ಪ್ರಕಟ

 

 

ಕನ್ನಡ ಸಾಹಿತ್ಯ ಪರಿಷತ್ ೨೦೧೦ರ ಜನವರಿ ೧ರಿಂದ ೩ರವರೆಗೆ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ಶ್ರೀ ಎಚ್.ಕೆ.ಮಳಲಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಎಲ್ಲಾ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ.

 

ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು, ದೂರವಾಣಿ ಸಂಖ್ಯೆ ೨೬೬೨೩೫೮೪ ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

 


Share: