ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಮಾಜಸೇವಾ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಆಹ್ವಾನ

ಸಮಾಜಸೇವಾ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಆಹ್ವಾನ

Sat, 08 Jun 2024 02:01:00  Office Staff   SOnews

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನಿನ ನೆರವು, ಅಲ್ಪಾವಧಿ ವಸತಿ ಹಾಗೂ ಆಪ್ತಸಮಾಲೋಚನಾ ಸೇವೆಗಳನ್ನು ಒದಗಿಸುವ ಸಲುವಾಗಿಸಖಿಒನ್ಸ್ಟಾಪ್ ಸೆಂಟರ್, ಕಾರವಾರ ಘಟಕಕ್ಕೆ ಹೊರಗುತ್ತಿಗೆ ಆಧಾರದ ಮೇರೆಗೆ ಸಮಾಜಸೇವಾ ಕಾರ್ಯಕರ್ತೆಯ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಿ.ಎಸ್.ಡಬ್ಲೂö್ಯ / ಬಿ.(ಸೋಷಿಯಾಲಜಿ)/ ಮಹಿಳಾ ಅಧ್ಯಯನದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 20 ರೊಳಗೆ ಸಲ್ಲಿಸಬೇಕು.

ಷರತ್ತುಗಳು ಮತ್ತು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ದೂ.ಸಂ: 08382-226761/226142ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: